ಸ್ಪೋಟಕ ಸುದ್ದಿ: ಅಕ್ಟೋಬರ್ 29ರಿಂದ ರಾಮಜನ್ಮ ಭೂಮಿ ಜಮೀನು ವಿವಾದ ವಿಚಾರಣೆ..!!!ಶೀಘ್ರದಲ್ಲೆ ತೀರ್ಪು...!!!

ವಿವಾದಿತ ಸ್ಥಳದಲ್ಲಿ ಮುಸ್ಲಿಮರು ನಮಾಜು ಮಾಡುವ ಕುರಿತಂತೆ 1994ರಲ್ಲಿ ಕೆಳಹಂತದ ನ್ಯಾಯಲಯವು ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಇಂದು(ಸೆಪ್ಟೆಂಬರ್ 27) ಆದೇಶ ನೀಡಿದೆ.
ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಡಿದೆ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ.

ಅಕ್ಟೋಬರ್ 29ರಂದು ರಾಮ ಜನ್ಮಭೂಮಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ.

ಹಿರಿಯ ವಕೀಲ ರಾಜೀವ್ ಧವನ್ ಅವರು 1994ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿದ್ದರಿಂದ ಪೂರ್ವಭಾವಿ ವಿವಾದದ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಜೆಐ ಮಿಶ್ರಾ ಹೇಳಿದ್ದರು. ನ್ಯಾ. ದೀಪಕ್ ಮಿಶ್ರಾ ಹಾಗೂ ಜಸ್ಟೀಸ್ ಅಶೋಕ್ ಭೂಷಣ್ ಅವರು ವಿಸ್ತೃತ ಪೀಠಕ್ಕೆ ಕೇಸ್ ವರ್ಗಾವಣೆ ಬೇಡ ಎಂದರೆ,ನ್ಯಾ ಅಬ್ದುಲ್ ನಜೀರ್ ಅವರು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಒಲವು ತೋರಿದ್ದರು.

ಶಿಯಾ ಮುಸ್ಲಿಂ ಸಂಘಟನೆಯೊಂದು ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಅಭ್ಯಂತರವೇನು ಇಲ್ಲ ಎಂದು ಕೋರ್ಟಿಗೆ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.
ತೀರ್ಪಿನ ಪ್ರಮುಖ ಅಂಶಗಳು:

* 1994ರ ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಇಸ್ಲಾಂ ಪ್ರಕಾರ ಮಸೀದಿಯ ಮಹತ್ವ ಹಾಗೂ ನಮಾಜ್ ಮಾಡಲು ಅದೇ ಜಾಗ ಆಗಬೇಕೆಂದೇನಿಲ್ಲ, ಬಯಲು ಪ್ರದೇಶವೊಂದರಲ್ಲೂ ಪ್ರಾರ್ಥನೆ ಸಲ್ಲಿಸಬಹುದು.

* ಮಸೀದಿ ಕುರಿತ ಫಾರೂಕಿ ತೀರ್ಪಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ ಇಲ್ಲ.

* 1994ರಲ್ಲಿ ಫಾರೂಕಿ ಅವರು ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರ ಜಾಗ, ಜಮೀನಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

* ಅಗತ್ಯಬಿದ್ದಾಗ ದೇಶದ ಯಾವುದೇ ದೇಗುಲ, ಮಸೀದಿ ಮತ್ತು ಚರ್ಚ್‌ಗಳನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬಹುದು

* ಅಯೋಧ್ಯೆ ರಾಮ ಮಂದಿರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಸದಸ್ಯರ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಲು ಸಾಧ್ಯವಿಲ್ಲ.

* ಸಿಜೆಐ ದೀಪಕ್ ಮಿಶ್ರಾ ಹಾಗೂ ನ್ಯಾ ಅಶೋಕ್ ಭೂಷಣ್ ಅವರು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದರೆ ನ್ಯಾ ಅಬ್ದುಲ್ ನಜೀರ್ ಅಸಮ್ಮತಿ ವ್ಯಕ್ತಪಡಿಸಿದರು.

* 'ಮಸೀದಿಯನ್ನು ಅವಿಭಾಜ್ಯ ಅಂಗ ಅಲ್ಲ' ಎನ್ನಲು ಸಾಧ್ಯವಿಲ್ಲ, ಎಂದು ವಾದಿಸಿದ್ದ ಸುನ್ನಿ ವಕ್ಫ್ ಬೋರ್ಡ್ ಮತ್ತು ಕೆಲ ಮುಸ್ಲಿಂ ಸಂಘಟನೆಗಳು 1994ರ ಇಸ್ಮಾಯಿಲ್‌ ಫಾರುಕಿ ತೀರ್ಪನ್ನು ಪ್ರಶ್ನಿಸಿ 7 ಸದಸ್ಯರ ವಿಸ್ತೃತ ಸಂವಿಧಾನ ಪೀಠ ರಚನೆ ಮಾಡಿ, ಪ್ರಕರಣವನ್ನು ವರ್ಗಾಯಿಸಲು ಕೋರಿದ್ದರು.

* ಇದಲ್ಲದೆ, ರಾಮಜನ್ಮ ಭೂಮಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 29ರಿಂದ ನಿರಂತರವಾಗಿ ವಿಚಾರಣೆ ನಡೆಯಲಿದೆ.

Comments