ಸ್ಪೋಟಕ ಸತ್ಯ: ಪಿತೃಪಕ್ಷದ ಬಳಿಕ ದೋಸ್ತಿ ಸರ್ಕಾರ ಪತನ..?? ಶಾಸಕನ ಹೇಳಿಕೆ...!!!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನ ನಡೆಸುತ್ತಿದೆ ಎಂಬ ಮಾತುಗಳ ಮಧ್ಯೆ ಈಗ ಶಾಸಕರೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಾಸಕ ವೀರಣ್ಣ ಚರಂತಿಮಠ, ಆಂತರಿಕ ಕಚ್ಚಾಟದಿಂದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಪಿತೃಪಕ್ಷದ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಸ್ಥಾಪನೆಯಾಗಲಿದೆ ಎಂದಿದ್ದಾರೆ.
ಚುನಾಯಿತ ಶಾಸಕರು ರಾಜೀನಾಮೆ ನೀಡಿ ಮತ್ತೆ ಗೆಲ್ಲುವುದು ಅಷ್ಟು ಸುಲಭವಲ್ಲ. ಆದರೆ ಕಚ್ಚಾಟದಿಂದ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಈ ಕಾರ್ಯ ಪಿತೃ ಪಕ್ಷದ ನಂತರ ಆಗಲಿದೆ ಎಂದು ಹೇಳಿರುವ ವೀರಣ್ಣ ಚರಂತಿಮಠ, ಬಿಜೆಪಿ ಸರ್ಕಾರ ರಚಿಸಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

Comments